Honorable Chief Minister | Government of Karnataka
Shri G T DeveGowda
Honorable MLA and President
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಗೌರವಾನ್ವಿತ ಕವಟಗಿಮಠ ಕುಟುಂಬದವರಾದ ಶ್ರೀ ಜಗದೀಶ್ ಕವಟಗಿಮಠ ಅವರು ಬಿ.ಎ., ಎಲ್.ಎಲ್.ಬಿ. ಪದವೀಧರರಾಗಿದ್ದು, ಸಹಕಾರ, ಶಿಕ್ಷಣ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ವಿಶೇಷ ಆಸಕ್ತಿ ಹೊಂದಿ ಸಮಾಜಮುಖಿ ಕಾರ್ಯಗಳ ಮೂಲಕ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದಾರೆ. ಚಿಕ್ಕೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿ ಮಾರ್ಗದರ್ಶನ ನೀಡುತ್ತಿರುವ ಅವರು, ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್‌ನ ಉಪಾಧ್ಯಕ್ಷರಾಗಿ ಹಾಗೂ ಚಿಕ್ಕೋಡಿ ವಸತಿ ಸಹಕಾರ ಸಂಘದ ನಿರ್ದೇಶಕರಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿಯೂ ತಮ್ಮದೇ ಆದ ಕೊಡುಗೆಯನ್ನು ನೀಡಿರುವ ಶ್ರೀ ಜಗದೀಶ್ ಕವಟಗಿಮಠ ಅವರು, ಚಿಕ್ಕೋಡಿಯ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ ಚಿಕ್ಕೋಡಿ ಪುರಸಭೆಯ ಅಧ್ಯಕ್ಷರಾಗಿ ಜನಪರ ಆಡಳಿತ ನೀಡಿರುವುದು ಸ್ಮರಣೀಯವಾಗಿದೆ. ಅವರು ಚಿಕ್ಕೋಡಿ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಹಾಗೂ ಚಿಕ್ಕೋಡಿಯ ಸಾಯಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದಾರೆ.
ಶ್ರೀ ಜಗದೀಶ್ ಕವಟಗಿಮಠ ಅವರು ವಿವಿಧ ಸಹಕಾರ ಸಂಘ-ಸಂಸ್ಥೆಗಳು, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಅನುಪಮ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಉಪಾಧ್ಯಕ್ಷರಾಗಿ ಹಾಗೂ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ಸಹಕಾರ ಚಳುವಳಿಯ ಅಭಿವೃದ್ಧಿಗೆ ತಮ್ಮ ಅಮೂಲ್ಯ ಮಾರ್ಗದರ್ಶನ ಮತ್ತು ನಾಯಕತ್ವವನ್ನು ನೀಡುತ್ತಿದ್ದಾರೆ.